ಗ್ರಾಮ ಒನ್ ಕೇಂದ್ರವು ಗ್ರಾಮೀಣ ಪ್ರದೇಶದ ಜನರಿಗೆ ಸರ್ಕಾರದ ವಿವಿಧ ಸೇವೆಗಳನ್ನು ಸುಲಭವಾಗಿ ಒದಗಿಸುವ ಉದ್ದೇಶದಿಂದ ಆರಂಭಿಸಲಾಗಿದೆ. ಇಲ್ಲಿ ಹಲವಾರು ಸೇವೆಗಳು ಒಂದೇ ಸ್ಥಳದಲ್ಲಿ ಲಭ್ಯವಿರುತ್ತವೆ.
ಆದಾಯ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ನಿವಾಸ ಪ್ರಮಾಣ ಪತ್ರ, ಜನನ ಪ್ರಮಾಣ ಪತ್ರ ಮತ್ತು ಮರಣ ಪ್ರಮಾಣ ಪತ್ರಗಳಿಗಾಗಿ ಇಲ್ಲಿ ಅರ್ಜಿ ಸಲ್ಲಿಸಬಹುದು.
ಇದಲ್ಲದೆ ಆಧಾರ್ ಅಪ್ಡೇಟ್, ಪ್ಯಾನ್ ಕಾರ್ಡ್ ಅರ್ಜಿ, ಮತದಾರರ ಗುರುತಿನ ಚೀಟಿ ಸೇವೆಗಳು ಹಾಗೂ ಆನ್‌ಲೈನ್ ಟಿಕೆಟ್ ಬುಕ್ಕಿಂಗ್ ಕೂಡ ಲಭ್ಯ.
